ʼಉತ್ತರಪ್ರದೇಶ ಮದರಸಾ ಕಾಯ್ದೆʼಯ ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಹೈಕೋರ್ಟ್ ಆದೇಶ ರದ್ದು

Update: 2024-11-05 07:11 GMT

ಸಾಂದರ್ಭಿಕ ಚಿತ್ರ 

ಹೊಸದಿಲ್ಲಿ: ʼಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್- 2004ʼರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದ್ದು, ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಉತ್ತರಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್- 2004ರ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿದೆ. ಈ ಕುರಿತ ಅಲಹಾಬಾದ್ ಹೈಕೋರ್ಟ್‌ನ ಈ ಹಿಂದಿನ ತೀರ್ಪನ್ನು ರದ್ದುಗೊಳಿಸಿದೆ.

ಮಾರ್ಚ್‌ನಲ್ಲಿ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಬೋರ್ಡ್ ಆಫ್ ಮದರ್ಸಾ ಎಜುಕೇಶನ್ ಆಕ್ಟ್- 2004 (ಮದರಸಾ ಆಕ್ಟ್) ನ್ನು ರದ್ದುಗೊಳಿಸಿತ್ತು. ಇದು ಜಾತ್ಯತೀತತೆಯ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು.

ಈ ʼಉತ್ತರಪ್ರದೇಶ ಮದರಸಾ ಕಾಯ್ದೆʼ ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿಯನ್ನು ರಚಿಸುವ ಬಗ್ಗೆ ಹೇಳುತ್ತದೆ. ಮಂಡಳಿಯಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿರಬೇಕೆಂದು ಹೇಳುತ್ತದೆ. ಮಂಡಳಿಯ ಕಾರ್ಯಗಳನ್ನು ಕಾಯ್ದೆಯ ಸೆಕ್ಷನ್ 9ರ ಅಡಿಯಲ್ಲಿ ವಿವರಿಸಲಾಗಿದೆ. ಇದರಲ್ಲಿ ಕೋರ್ಸ್ ಗೆ ಪಠ್ಯಗಳನ್ನು ಸಿದ್ಧಪಡಿಸುವುದು ಮತ್ತು ಶಿಫಾರಸು ಮಾಡುವುದು ಮತ್ತು ʼಮೌಲ್ವಿ' 'ಫಾಝಿಲ್' ಕೋರ್ಸ್‌ ಗಳಿಗೆ ಪರೀಕ್ಷೆಗಳನ್ನು ನಡೆಸುವುದು ಸೇರಿದೆ.  

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News