ತಮಿಳುನಾಡು | ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪೊಲೀಸ್ ವಶಕ್ಕೆ

Update: 2024-12-20 22:53 IST
ತಮಿಳುನಾಡು | ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪೊಲೀಸ್ ವಶಕ್ಕೆ

PC : X/@MumbaichaDon

  • whatsapp icon

ಹೊಸದಿಲ್ಲಿ : ತಮಿಳುನಾಡಿನ ಕೊಯಮತ್ತೂರಿನಲ್ಲಿ ಬ್ಲ್ಯಾಕ್ ಡೇ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಯಮತ್ತೂರು ಸ್ಫೋಟದ ಅಪರಾಧಿಯ ಅಂತ್ಯಸಂಸ್ಕಾರವನ್ನು ವೈಭವೀಕರಿಸುವುದನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಶುಕ್ರವಾರ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು.

ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಇತರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯಲ್ಲಿ ಬಿಜೆಪಿ ಸದಸ್ಯರು ಮತ್ತು ಹಿಂದೂ ಮುನ್ನಾನಿ ಸೇರಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್)ವು ರಾಜ್ಯ ಸರ್ಕಾರವು "ಕೊಯಂಬತ್ತೂರು ಬಾಂಬ್ ಸ್ಫೋಟದ ಅಪರಾಧಿಯನ್ನು" ಬೆಂಬಲಿಸುತ್ತಿದೆ ಎಂದು ಆರೋಪಿಸುತ್ತಿರುವ ಬ್ಯಾನರ್‌ಗಳನ್ನು ಹಿಡಿದುಕೊಂಡು ಪ್ರತಿಭಟನೆಯನ್ನು ನಡೆಸಿತು.

ಎಸ್‌ಎ ಬಾಷಾ, ನಿಷೇಧಿತ ಅಲ್-ಉಮ್ಮಾ ಸಂಸ್ಥಾಪಕ ಮತ್ತು 1998ರ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ. ಪೆರೋಲ್‌ ನಲ್ಲಿದ್ದ ಬಾಷಾ ವಯೋಸಹಜ ಅನಾರೋಗ್ಯದಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ರ್ಯಾಲಿಗೆ ಬಿಜೆಪಿಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮತಿಯಿಲ್ಲದ ರ್ಯಾಲಿಯಲ್ಲಿ ಭಾಗವಹಿಸಿದ್ದವರನ್ನು ಬಂಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News