ಕುತೂಹಲ ಮೂಡಿಸಿದ ತೆಲಂಗಾಣ ಸಿಎಂ ಕೆಸಿಆರ್- ಅಖಿಲೇಶ್ ಯಾದವ್ ಭೇಟಿ
Update: 2023-07-03 19:00 GMT
ಹೈದರಾಬಾದ್: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿದ್ದಾರೆ.
ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಥವಾ ಇನ್ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿರುವ ಬೆನ್ನಲ್ಲೇ ಉಭಯ ನಾಯಕರ ಭೇಟಿಯು ಮಹತ್ವವನ್ನು ಪಡೆದಿದೆ. ಅಲ್ಲದೆ, ಮಹರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕಾರಣಕ್ಕೂ ಈ ಭೇಟಿ ಕುತೂಹಲ ಹುಟ್ಟಿಸಿದೆ.
ಬಿಜೆಪಿಯನ್ನು ಎದುರಿಸುವ ಹೋರಾಟದಲ್ಲಿ ಕೆಸಿಆರ್ ಮತ್ತು ಬಿಆರ್‌ಎಸ್‌ನ ಪ್ರಾಮುಖ್ಯತೆಯನ್ನು ಪ್ರತಿಪಕ್ಷಗಳು ಅರಿತುಕೊಂಡಿವೆ ಎಂಬುದನ್ನು ಯಾದವ್ ಅವರ ಭೇಟಿಯು ತೋರಿಸುತ್ತದೆ ಎಂದು ಬಿಆರ್‌ಎಸ್ ಮೂಲಗಳು ಹೇಳಿವೆ.
ಭೇಟಿಗೂ ಮುನ್ನ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಯಾದವ್, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಮಾರ್ಗಗಳನ್ನು ಹುಡುಕಬೇಕಾಗಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.