ಬೆಟ್ಟಿಂಗ್ ಆ್ಯಪ್ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ಧ ಪ್ರಕರಣ ದಾಖಲು
Update: 2025-03-20 14:46 IST

Photo | indianexpress
ಹೈದರಾಬಾದ್: ಕಾನೂನುಬಾಹಿರ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ಟಾಲಿವುಡ್‌ನ ಖ್ಯಾತ ತಾರೆಯರಾದ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಹಾಗೂ ಮಂಚು ಲಕ್ಷ್ಮಿ ಸೇರಿದಂತೆ ಒಟ್ಟು 25 ಮಂದಿ ಸಿನಿಮಾ ತಾರೆಯರು ಹಾಗೂ ಸಾಮಾಜಿಕ ಮಾಧ್ಯಮಗಳ ಪ್ರಭಾವಿಗಳ ವಿರುದ್ಧ ತೆಲಂಗಾಣದಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಮಿ ಫಣೀಂದ್ರ ಶರ್ಮ(32) ಎಂಬವರು ನೀಡಿದ ದೂರಿನ ಮೇರೆಗೆ ಹೈದರಾಬಾದ್‌ನ ಮಿಯಾಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.