ಮಂಗಳವಾರ ಲೋಕಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ ಸಾಧ್ಯತೆ

Update: 2024-12-16 17:48 GMT

 ಲೋಕಸಭೆ |  PC : PTI 

ಹೊಸದಿಲ್ಲಿ: ಲೋಕಸಭೆ ಹಾಗೂ ವಿಧಾನ ಸಭೆಗೆ ಏಕ ಕಾಲದಲ್ಲಿ ಚುನಾವಣೆ ನಡೆಸುವ ‘ಒಂದು ದೇಶ, ಒಂದು ಚುನಾವಣೆ’ಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಸರಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಿದೆ.

‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಎಂದು ಕರೆಯಲಾಗುವ ಸಂವಿಧಾನ (129ನೇ ತಿದ್ದುಪಡಿ) ಮಸೂದೆ-2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘಾವಲ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಸರಕಾರದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಸೂದೆ ಮಂಡನೆ ಬಳಿಕ ವ್ಯಾಪಕ ಪರಿಶೀಲನೆಗಾಗಿ ಸಂಸತ್ತಿನ  ಜಂಟಿ   ಸಮಿತಿಗೆ ಶಿಫಾರಸು ಮಾಡುವಂತೆ ಮೇಘಾವಲ್ಅವರು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಮನವಿ ಮಾಡಲಿದ್ದಾರೆ.

ವಿವಿಧ ಪಕ್ಷಗಳ ಸಂಸದರ ಸಂಖ್ಯಾಬಲದ ಅನುಪಾತದ ಅಧಾರದಲ್ಲಿ ಜಂಟಿ ಸಮಿತಿಯನ್ನು ರೂಪಿಸಲಾಗುತ್ತದೆ. ಲೋಕಸಭೆಯಲ್ಲಿ ದೊಡ್ಡ ಪಕ್ಷವಾಗಿರುವುದರಿಂದ ಬಿಜೆಪಿಗೆ ಅಧ್ಯಕ್ಷ ಸ್ಥಾನ ದೊರೆಯಲಿದ್ದು, ಹಲವು ಪಕ್ಷಗಳ ಸಂಸದರು ಸದಸ್ಯರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News