ಸರ್ವಾಧಿಕಾರಿಯ ನಿಜವಾದ ಮುಖ ಮತ್ತೊಮ್ಮೆ ದೇಶದ ಮುಂದೆ ಬಂದಿದೆ : ರಾಹುಲ್ ಗಾಂಧಿ
Update: 2024-04-22 15:25 GMT
ಹೊಸದಿಲ್ಲಿ: “ಸರ್ವಾಧಿಕಾರಿಯ ನಿಜವಾದ ಮುಖ ಮತ್ತೊಮ್ಮೆ ದೇಶದ ಮುಂದೆ ಬಂದಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಮಾತ್ರವಲ್ಲದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶಪಡಿಸುವುದು ಸರ್ವಾಧಿಕಾರಿಯ ಮತ್ತೊಂದು ಹೆಜ್ಜೆಯಾಗಿದೆ”, ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.
“ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ – ಇದು ಕೇವಲ ಸರ್ಕಾರ ರಚಿಸುವ ಚುನಾವಣೆಯಲ್ಲ, ಇದು ದೇಶವನ್ನು ಉಳಿಸುವ ಚುನಾವಣೆ, ಇದು ಸಂವಿಧಾನವನ್ನು ರಕ್ಷಿಸುವ ಚುನಾವಣೆ” ಎಂದು ಅವರು ಎಚ್ಚರಿಸಿದ್ದಾರೆ.
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾದ ನಂತರ, ಕಣದಲ್ಲಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡ ಘಟನೆಯ ಬಳಿಕ ರಾಹುಲ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ.