ಪ್ರವಾದಿ ಮುಹಮ್ಮದ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ: ಇಬ್ಬರು ಬಜರಂಗದಳ ನಾಯಕರ ವಿರುದ್ಧ ಪ್ರಕರಣ ದಾಖಲು

Update: 2024-10-17 17:05 IST
ಪ್ರವಾದಿ ಮುಹಮ್ಮದ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ: ಇಬ್ಬರು ಬಜರಂಗದಳ ನಾಯಕರ ವಿರುದ್ಧ ಪ್ರಕರಣ ದಾಖಲು

Photo credit: PTI

  • whatsapp icon

ಪಿಲಿಭೀತ್: ಉತ್ತರ ಪ್ರದೇಶದ ಪಿಲ್ಭಿಟ್ ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಇಬ್ಬರು ಬಜರಂಗದಳ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು ಸಂಜಯ್ ಮಿಶ್ರಾ ಹಾಗೂ ವಿವೇಕ್ ಮಿಶ್ರಾ ಎಂದು ಗುರುತಿಸಲಾಗಿದೆ.

ಅಫ್ಝಲ್ ಖಾನ್ ಎಂಬವರು ದಾಖಲಿಸಿರುವ ದೂರಿನ ಪ್ರಕಾರ, ಈ ಘಟನೆಯು ಅಕ್ಟೋಬರ್ 13ರಂದು ಮಧೊತಂಡ ಪಟ್ಟಣದಲ್ಲಿ ನಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವೃತ್ತಾಧಿಕಾರಿ ವಿಶಾಲ್ ಚೌಧರಿ, “ಸಭೆಯೊಯೊಂದರಲ್ಲಿ ಭಾಷಣ ಮಾಡುವಾಗ ಬಜರಂಗದಳ ನಾಯಕರಾದ ಸಂಜಯ್ ಮಿಶ್ರಾ ಹಾಗೂ ವಿವೇಕ್ ಮಿಶ್ರಾ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಾಕಾರಿ ಹಾಗೂ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ” ಎಂದು ಹೇಳಿದ್ದಾರೆ.

ಈ ಇಬ್ಬರು ನಾಯಕರು ಮಾಡಿರುವ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಈ ಸಂಬಂಧ ಅಫ್ಝಲ್ ಖಾನ್ ನೀಡಿರುವ ದೂರನ್ನು ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News