ಉತ್ತರ ಪ್ರದೇಶ: ಇಬ್ಬರು ಬಾಲಕಿಯರ ಮೃತದೇಹ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Update: 2024-08-27 13:45 IST
ಉತ್ತರ ಪ್ರದೇಶ: ಇಬ್ಬರು ಬಾಲಕಿಯರ ಮೃತದೇಹ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಫರೂಕಾಬಾದ್ ಎಸ್ಪಿ ಅಲೋಕ್ ಪ್ರಿಯದರ್ಶಿ (Photo:X/@ANINewsUP)

  • whatsapp icon

ಲಕ್ನೊ : ಒಂದೇ ನೇಣಿಗೆ ಕೊರಳೊಡ್ಡಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹ ಉತ್ತರ ಪ್ರದೇಶದ ಕೈಮ್‌ಗಂಜ್‌ನ ಭಾಗೌತಿಪುರ್ ಗ್ರಾಮದಲ್ಲಿ ಮಂಗಳವಾರ ಪತ್ತೆಯಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆತ್ಮೀಯ ಸ್ನೇಹಿತತರಾಗಿದ್ದ 18 ಮತ್ತು 15 ವರ್ಷದ ಇಬ್ಬರು ಬಾಲಕಿಯರು ಮೃತಪಟ್ಟವರು ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಫರೂಕಾಬಾದ್ ಎಸ್ಪಿ ಅಲೋಕ್ ಪ್ರಿಯದರ್ಶಿ,"ಇಬ್ಬರೂ ಬಾಲಕಿಯರು ಒಂದೇ ದುಪ್ಪಟ್ಟಾದಲ್ಲಿ ನೇಣು ಹಾಕಿಕೊಂಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತೋರುತ್ತದೆ. ಪೊಲೀಸರು ಘಟನಾ ಸ್ಥಳದಿಂದ ಒಂದು ಫೋನ್ ಮತ್ತು ಸಿಮ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News