ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್‌ಐಆರ್
Update: 2023-09-06 06:15 GMT
ರಾಮಪುರ್: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ಹಾಗೂ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದ ರಾಮಪುರ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ.
ಸನಾತನ ಧರ್ಮ ನಿರ್ಮೂಲನೆ ಕುರಿತು ನೀಡಿದ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೆ, ಉದಯನಿಧಿ ಹೇಳಿಕೆ ಬೆಂಬಲಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಸ್ ದಾಖಲಾಗಿದೆ.
ಇಬ್ಬರ ವಿರುದ್ಧವೂ ಐಪಿಸಿ ಸೆಕ್ಷನ್ 295ಎ ಹಾಗೂ 153ಎ ಅನ್ವಯ ರಾಮಪುರ್‌ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲರಾದ ಹರ್ಷ್ ಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರು ಈ ದೂರು ದಾಖಲಿಸಿದ್ದರು ಹಾಗೂ ಈ ರಾಜಕಾರಣಿಗಳ ಹೇಳಿಕೆ ತಮ್ಮ ಭಾವನೆಗಳಿಗೆ ಘಾಸಿಯುಂಟು ಮಾಡಿದೆ ಎಂದು ಆರೋಪಿಸಿದ್ದರು.