ರೆಸ್ಟೋರೆಂಟ್‌ಗಳಿಗೆ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ರ ಹೊಸ ನಿರ್ದೇಶನ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ: ಸಾಕೇತ್ ಗೋಖಲೆ

Update: 2024-09-26 06:52 GMT

ಸಾಕೇತ್ ಗೋಖಲೆ / ಪ್ರದೇಶ ಸಿಎಂ ಆದಿತ್ಯನಾಥ್ (Photo: PTI/ANI)

ಹೊಸದಿಲ್ಲಿ: ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ್ ಮತ್ತೆ ರೆಸ್ಟೋರೆಂಟ್ ಗಳಲ್ಲಿ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವ ಆದೇಶಗಳನ್ನು ಮಾಡುವ ಮೂಲಕ ಸುಪ್ರೀಂ ಕೋರ್ಟಿನ ಆದೇಶಗಳನ್ನು ಉಲ್ಲಂಘಿಸಿದ್ದಾರೆ. ಆ ಮೂಲಕ ತಾವು ಸುಪ್ರೀಂ ಕೋರ್ಟ್ ಗಿಂತ ಮೇಲು ಎಂದು ಭಾವಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಉತ್ತರ ಪ್ರದೇಶದ ಸಿಎಂ ಅವರು ರೆಸ್ಟೋರೆಂಟ್‌ಗಳು ಮತ್ತು ಅಂಗಡಿಗಳ ಮಾಲೀಕರು ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸುವ ನಿಯಮವನ್ನು ಜಾರಿಗೆ ತರಲು ಉತ್ತರ ಪ್ರದೇಶ ಸರಕಾರಕ್ಕೆ ಈ ವಾರ ಮತ್ತೆ ಮೌಖಿಕ ನಿರ್ದೇಶನಗಳನ್ನು ನೀಡಿದ್ದಾರೆ" ಎಂದು ತಿಳಿಸಿದ್ದಾರೆ.

ಆಹಾರ ಕಲಬೆರಕೆಯನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಮಾಲಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಲು ರೆಸ್ಟೋರೆಂಟ್‌ಗಳು ಮತ್ತು ಸಂಸ್ಥೆಗಳನ್ನು ಒತ್ತಾಯಿಸುವುದು ಮುಸ್ಲಿಮರನ್ನು ಪ್ರತ್ಯೇಕವಾಗಿಸುವ ಕೋಮುವಾದಿ ತಂತ್ರ ಎಂದು ಅವರು ಆರೋಪಿಸಿದ್ದಾರೆ.

ಜುಲೈ 22 ರಂದು, ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರವು ಕನ್ವರ್ ಯಾತ್ರೆಯ ಸಮಯದಲ್ಲಿ ನಿಖರವಾಗಿ ಇದೇ ರೀತಿಯ ಯೋಜನೆಯನ್ನು ಜಾರಿಗೊಳಿಸದಂತೆ ಮಧ್ಯಂತರ ಆದೇಶಗಳನ್ನು ನೀಡಿತ್ತು. ಆದಿತ್ಯನಾಥ್ ಅವರ ಈ ಹೊಸ ಮೌಖಿಕ ನಿರ್ದೇಶನವನ್ನು ಉತ್ತರ ಪ್ರದೇಶ ಸರ್ಕಾರವು ಆದೇಶದ ಮೂಲಕ ಇನ್ನೂ ತಿಳಿಸಿಲ್ಲ ಎಂದು ಸಾಕೇತ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಅಂತಹ ಯಾವುದೇ ತಾರತಮ್ಯದ ಆದೇಶವನ್ನು ಜಾರಿಗೊಳಿಸದಂತೆ ಒತ್ತಾಯಿಸಿ ನಾನು ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದೇನೆ. ಅಂತಹ ಯಾವುದೇ ನಿರ್ದೇಶನವನ್ನು ಅಂಗೀಕರಿಸಿದರೆ, ನ್ಯಾಯಾಲಯದ ನಿಂದನೆ ಪ್ರಕ್ರಿಯೆಗಾಗಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News