ಉತ್ತರ ಪ್ರದೇಶ | ಮೂರು ಅಂತಸ್ತಿನ ಕಟ್ಟಡ ಕುಸಿತ ; ಹಲವರು ಸಿಲುಕಿರುವ ಶಂಕೆ
Update: 2024-09-07 13:19 GMT
ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ ಶನಿವಾರ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಸುಮಾರು 10 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಲಕ್ನೋದ ಟ್ರಾನ್ಸ್‌ಪೋರ್ಟ್ ನಗರ ಪ್ರದೇಶದಲ್ಲಿ ಕಟ್ಟಡದ ನೆಲಮಾಳಿಗೆಯಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಹತ್ತು ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಬಳಸಲಾಗುತ್ತಿತ್ತು. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಕಂದಾಯ ಇಲಾಖೆಯ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡೆಗಿವೆ ಎಂದು ತಿಳಿದು ಬಂದಿದೆ.