ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಸ್ಪತ್ರೆಗೆ ದಾಖಲು
Update: 2025-03-09 10:35 IST

ಜಗದೀಪ್ ಧನಕರ್ | Photo: PTI
ಹೊಸದಿಲ್ಲಿ: ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ರವಿವಾರ ಮುಂಜಾನೆ ಏಮ್ಸ್(AIIMS) ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಜಗದೀಪ್ ಧನಕರ್ ಅವರು ಎದೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಮ್ಸ್ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ ರಾಜೀವ್ ನಾರಂಗ್ ಅವರ ನೇತೃತ್ವದ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಧನಕರ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.