ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದ ಕಂಗನಾ ರಣಾವತ್ ; ವೀಡಿಯೊ ವೈರಲ್

Update: 2024-04-04 17:45 GMT

ಕಂಗನಾ ರಾಣಾವತ್

ಹೊಸದಿಲ್ಲಿ : ಹಿಮಾಚಲದ ಮಂಡಿಯ ಬಿಜೆಪಿ ಲೋಕಸಭಾ ಅಭ್ಯರ್ಥಿಯೂ ಆಗಿರುವ ನಟಿ-ರಾಜಕಾರಣಿ ಕಂಗನಾ ರಣಾವತ್ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಹೇಳಿದ್ದಾರೆ.

ಟೈಮ್ಸ್ ನೌ ಸಮಿಟ್ ನಲ್ಲಿ ನಿರೂಪಕಿ ನವಿಕಾ ಕುಮಾರ್ ಅವರು ಕಂಗನಾ ರಣಾವತ್ ಅವರನ್ನು ಸಂದರ್ಶಿಸಿದಾಗ ಕಂಗನಾ ಈ ಹೇಳಿಕೆ ನೀಡಿದ್ದಾರೆ. ಈ ವೀಡಿಯೊ ವೈರಲ್ ಆಗಿದ್ದು, ಅವರ ಹೇಳಿಕೆ ಟ್ರೋಲ್‌ ಆಗಿದೆ. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್, ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತು ಇತರರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ತಪ್ಪಾಗಿ ಹೇಳಿದರೂ, ಆಂಕರ್ ನವಿಕಾ ಕುಮಾರ್ , ಕಂಗನಾ ರಣಾವತ್ ಅವರನ್ನು ಸರಿಪಡಿಸಲು ಪ್ರಯತ್ನಿಸಲಿಲ್ಲ. ಆದರೆ, ಸುಭಾಷ್ ಚಂದ್ರ ಬೋಸ್ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಅಲ್ಲ ಎಂದು ನಾವಿಕ ಕುಮಾರ್ ಹೇಳಿದಾಗ, ಕಂಗನಾ "ಹಾಗಾದರೆ ಅವರೇಕೆ ಪ್ರಧಾನಿಯಾಗಲಿಲ್ಲ?" ಎಂದು ಮರುಪ್ರಶ್ನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News