ವಕ್ಫ್ ಮಸೂದೆ: ಜೆಪಿಸಿ ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅಸ್ತು

Update: 2025-02-27 08:00 IST
ವಕ್ಫ್ ಮಸೂದೆ: ಜೆಪಿಸಿ ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅಸ್ತು

PC: PTI

  • whatsapp icon

ಹೊಸದಿಲ್ಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸದೀಯ ಮಂಡಳಿ ಶಿಫಾರಸ್ಸು ಮಾಡಿರುವ ಈ ತಿದ್ದುಪಡಿಯನ್ನು ಮಸೂದೆಗೆ ಸೇರಿಸುವ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ನಡೆಯಲು ಹಾದಿ ಸುಗಮಗೊಂಡಂತಾಗಿದೆ.

ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಹಾಗೂ ಭಾರತೀಯ ಬಂದರು ಮಸೂದೆಯ ಜತೆಗೆ ಕಳೆದ ವಾರ ಈ ಮಸೂದೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸರ್ಕಾರ ಈ ಮಸೂದೆಯನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಮಂಡಿಸಿದ ಬಳಿಕ 2024ರ ಆಗಸ್ಟ್ ನಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಪರಾಮರ್ಶೆಗೆ ನೀಡಲಾಗಿತ್ತು. ಜಂಟಿ ಸಂಸದೀಯ ಸಮಿತಿಯಲ್ಲಿರುವ ವಿರೋಧ ಪಕ್ಷಗಳಿಗೆ ಸೇರಿದ ಎಲ್ಲ 11 ಮಂದಿ ಸಂಸದರು ವರದಿಗೆ ಆಕ್ಷೇಪ ವ್ಯಕ್ತಪಡಿಸಿದರೂ, ಬಹುಮತದಿಂದ ವರದಿಯನ್ನು ಸಮಿತಿ ಆಂಗೀಕರಿಸಿದೆ. ಈ ಸಂಸದರು ಭಿನ್ನಾಭಿಪ್ರಾಯ ಟಿಪ್ಪಣಿಯನ್ನೂ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News