ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Update: 2024-09-23 06:07 GMT

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸ್ಟೋರೇಜ್ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್ ನ ಈ ಹಿಂದಿನ ತೀರ್ಪನ್ನು ಬದಿಗೊತ್ತಿದ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ.

ಸಿಜೆಐ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪನ್ನು ನೀಡಿದ್ದು, ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಪಡಿಸುವಲ್ಲಿ ಮದ್ರಾಸ್ ಹೈಕೋರ್ಟ್ ದೋಷ ಎಸಗಿದೆ ಎಂದು ಹೇಳಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News