ಪಶ್ಚಿಮಬಂಗಾಳ ಪಂಚಾಯತ್ ಚುನಾವಣೆಯ ಮತ ಎಣಿಕೆ ಆರಂಭ: ಹೆಚ್ಚಿನ ಸ್ಥಾನಗಳಲ್ಲಿ ತೃಣಮೂಲ ಕಾಂಗ್ರೆಸ್ ಗೆ ಆರಂಭಿಕ ಮುನ್ನಡೆ

Update: 2023-07-11 05:23 GMT

ಸಾಂದರ್ಭಿಕ ಚಿತ್ರ, Photo: PTI

ಕೋಲ್ಕತಾ: 2024ರ ಲೋಕಸಭಾ ಚುನಾವಣೆಗೆ ಸೆಮಿ ಫೈನಲ್ ಎಂದೇ ಪರಿಗಣಿಸಲಾಗಿರುವ ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆಯ ಫಲಿತಾಂಶ ವನ್ನು ಇಂದು ಪ್ರಕಟಿಸಲಾಗುತ್ತದೆ. ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.

ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಪಡೆಗಳು ಹಾಗೂ ರಾಜ್ಯ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಸುಮಾರು 74,000 ಸೀಟುಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯು 22 ಜಿಲ್ಲೆಗಳಾದ್ಯಂತ 339 ಎಣಿಕಾ ಸ್ಥಳಗಳಲ್ಲಿ ನಡೆಯಲಿದೆ.

ಆರಂಭಿಕ ಟ್ರೆಂಡ್ ಪ್ರಕಾರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪರಿಷದ್ ಸೀಟುಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ರಾಜಕೀಯ ಪಕ್ಷಗಳು ಇನ್ನಷ್ಟೇ ಸೀಟು ಗಳಿಸಬೇಕಾಗಿದೆ. 

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಂದು ಗ್ರಾಮ ಪಂಚಾಯತ್ ಸ್ಥಾನವನ್ನು ಗೆದ್ದಿದೆ ಹಾಗೂ ಉತ್ತರ 24 ಪರಗಣ ಜಿಲ್ಲೆಯಲ್ಲಿ 59 ರಲ್ಲಿ ಮುನ್ನಡೆ ಸಾಧಿಸಿದೆ. ಪಶ್ಚಿಮ ಬಂಗಾಳದಾದ್ಯಂತ ಆಡಳಿತ ಪಕ್ಷವು ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಮತಗಳ ಎಣಿಕೆಗಳನ್ನು ಆರು ಹಂತಗಳಲ್ಲಿ ನಡೆಸಲಾಗುತ್ತದೆ. ಗ್ರಾಮ ಪಂಚಾಯತ್ ಬ್ಯಾಲಟ್ ಗಲನ್ನು ಮೊದಲಿಗೆ ಲೆಕ್ಕ ಹಾಕಲಾಗುತ್ತದೆ. ಆ ನಂತರ ಪಂಚಾಯತ್ ಸಮಿತಿ ಹಾಗೂ ಜಿಲ್ಲಾ ಪರಿಷದ್ ಮತಗಳನ್ನು ಎಣಿಕೆ ಮಾಡಲಾಗುತ್ತದೆ.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News