ಪಶ್ಚಿಮ ಬಂಗಾಳ ಶಾಲಾ ಉದ್ಯೋಗ ಹಗರಣ: ಹೈಕೋರ್ಟ್ ನಿಂದ ಅಭಿಷೇಕ್ ಬ್ಯಾನರ್ಜಿಗೆ ರಿಲೀಫ್‌

Update: 2023-09-22 17:05 GMT

ಅಭಿಷೇಕ್ ಬ್ಯಾನರ್ಜಿ | Photo: PTI

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿನ ಶಾಲಾ ಉದ್ಯೋಗ ಹಗರಣದಲ್ಲಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯಕ್ಕೆ ಕಲ್ಕತ್ತಾ ಹೈಕೋರ್ಟ್ ಅವರ ವಿರುದ್ಧ ಯಾವುದೇ ಮಾನ ಹಾನಿಕಾರಕ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಿದೆ ಎಂದು ndtv.com ವರದಿ ಮಾಡಿದೆ.

ಆದರೆ, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಫ್‌ಐಆರ್‌ ಗೆ ಸಮಾನಾಂತರವಾದ ಜಾರಿ ಪ್ರಕರಣ ಮಾಹಿತಿ ವರದಿಯನ್ನು ಹೈಕೋರ್ಟ್ ವಜಾಗೊಳಿಸಿಲ್ಲ. ಜಾರಿ ಪ್ರಕರಣ ಮಾಹಿತಿ ವರದಿಯನ್ನು ಆಧರಿಸಿ ಟಿಎಂಸಿ ನಾಯಕ ಹಾಗೂ ಸಂಸದ ಬ್ಯಾನರ್ಜಿ ವಿರುದ್ಧ ಯಾವುದೇ ಮಾನ ಹಾನಿಕಾರಕ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ನ್ಯಾ. ತೀರ್ಥಂಕರ್ ಘೋಷ್ ಅವರನ್ನೊಳಗೊಂಡಿದ್ದ ಏಕಸದಸ್ಯ ಪೀಠವು ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಬ್ಯಾನರ್ಜಿ ಬಂಧನಕ್ಕೆ ವಾರಂಟ್ ಹೊರಡಿಸಲು ಸಾಕಷ್ಟು ಸಾಕ್ಷ್ಯವನ್ನು ಜಾರಿ ನಿರ್ದೇಶನಾಲಯ ಒದಗಿಸಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಇದೇ ವೇಳೆ, ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ನಡೆದಿರುವ ಉದ್ಯೋಗ ನೇಮಕಾತಿಗಳಲ್ಲಿನ ಅಕ್ರಮಗಳ ಆರೋಪ ಕುರಿತು ಬ್ಯಾನರ್ಜಿ ವಿರುದ್ಧ ತನಿಖೆ ಮುಂದುವರಿಯಲಿದೆ ಎಂದೂ ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇತ್ತೀಚಿಗೆ, ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಅಭಿಷೇಕ್ ಬ್ಯಾನರ್ಜಿ ಅವರನ್ನು ಜಾರಿ ನಿರ್ದೇಶನಾಲಯವು ಪಶ್ಚಿಮ ಬಂಗಾಳ ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸತತ ಒಂಬತ್ತು ಗಂಟೆಗಳ ಕಾಲ ವಿಚಾರಣೆಗೊಳಪಡಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News