ಭಾರತ - ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು: ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-10-15 06:37 GMT

ಜೈರಾಮ್ ರಮೇಶ್ (Photo: PTI)

ಹೊಸ ದಿಲ್ಲಿ: ಕೆನಡಾದೊಂದಿಗಿನ ಅತೀವ ಸೂಕ್ಷ್ಮ ಹಾಗೂ ಗಂಭೀರ ದ್ವಿಪಕ್ಷೀಯ ಸಂಬಂಧದ ಕುರಿತು ವಿರೋಧ ಪಕ್ಷಗಳು ಹಾಗೂ ರಾಜಕೀಯ ಪಕ್ಷಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸುವಂತೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದ್ದಾರೆ.

ಭಾರತ ಮತ್ತು ಕೆನಡಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ತೀವ್ರವಾಗಿ ಬಿಗಡಾಯಿಸಿರುವ ಬೆನ್ನಿಗೇ ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, "ಭಾರತ ಮತ್ತು ಕೆನಡಾ ನಡುವಿನ ಅತೀವ ಸೂಕ್ಷ್ಮ ಹಾಗೂ ಗಂಭೀರ ದ್ವಿಪಕ್ಷೀಯ ಸಂಬಂಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಮತ್ತು ರಾಜ್ಯಸಭಾ ವಿರೋಧ ಪಕ್ಷಗಳ ನಾಯಕರು ಹಾಗೂ ರಾಜಕೀಯ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದ್ದಾರೆ ಎಂಬ ಭರವಸೆ ಕಾಂಗ್ರೆಸ್ ಪಕ್ಷಕ್ಕಿದೆ" ಎಂದು ಬರೆದುಕೊಂಡಿದ್ದಾರೆ.

ಗಮನಾರ್ಹ ರಾಜತಾಂತ್ರಿಕ ನಡೆಯೊಂದರಲ್ಲಿ ಭಾರತವು ಆರು ಮಂದಿ ಕೆನಡಾ ರಾಜತಾಂತ್ರಿಕರನ್ನು ಭಾರತದಿಂದ ಉಚ್ಚಾಟಿಸಿದ ಬೆನ್ನಿಗೇ ಜೈರಾಮ್ ರಮೇಶ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News