ಮಹಿಳೆಗೆ ಮದ್ಯಪಾನ ಮಾಡಿಸಿ ರಸ್ತೆಯಲ್ಲೇ ಅತ್ಯಾಚಾರ!

Update: 2024-09-06 02:45 GMT

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ರಸ್ತೆಯಲ್ಲೇ ಅತ್ಯಾಚಾರ ಎಸಗುತ್ತಿರುವ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಗೆ ಲೈಂಗಿಕ ಕಿರುಕುಳ ನೀಡುವ ಮುನ್ನ ಆಕೆಗೆ ಮದ್ಯಪಾನ ಮಾಡಿಸಿದ್ದ ಎಂದು ಆಪಾದಿಸಲಾಗಿದ್ದು, ವಿಡಿಯೊ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಮಹಿಳೆಯನ್ನು ವಿವಾಹವಾಗುವುದಾಗಿ ನಂಬಿಸಿ ಬುಧವಾರ ಈ ಅಪರಾಧ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆಕೆಗೆ ಮದ್ಯಪಾನ ಮಾಡಿಸಿ ಅತ್ಯಾಚಾರ ಎಸಗಿದ್ದಾನೆ. ಈ ಲೈಂಗಿಕ ಕಿರುಕುಳದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ತಲೆ ಮರೆಸಿಕೊಂಡಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.

"ಆರೋಪಿ ವ್ಯಕ್ತಿ ಮಹಿಳೆಯರನ್ನು ವಿವಾಹವಾಗುವುದಾಗಿ ನಂಬಿಸಿ, ಆಕೆಗೆ ಮದ್ಯಪಾನ ಮಾಡಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸಲು ಸಾಧ್ಯವಾಗಿದೆ " ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News