ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ

Update: 2024-09-06 10:02 GMT

Photo: ANI

ಹೊಸದಿಲ್ಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಗೋಷ್ಟಿಯಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದರು.

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಸ್ಪರ್ಧಿಸಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News