ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

Update: 2024-07-03 18:22 GMT

Photo : PTI

ಹೊಸದಿಲ್ಲಿ : ಆರೋಗ್ಯದಲ್ಲಿ ಏರುಪೇರಾದ ಕಾರಣ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅಡ್ವಾಣಿ ಅವರನ್ನು ದಿಲ್ಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ ಕೆ ಅಡ್ವಾಣಿ ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಅಡ್ವಾಣಿಯವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವಾರವಷ್ಟೇ ಅಡ್ವಾಣಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗುಣಮುಖರಾದ ಅವರನ್ನು ಡಿಸ್ಚಾರ್ಜ್‌ ಮಾಡಲಾಗಿತ್ತು. ಈಗ ಮತ್ತೆ ಅವರ ಆರೋಗ್ಯದಲ್ಲಿ ದಿಢೀರನೆ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News