ತಮಿಳುನಾಡಿನಲ್ಲಿ 2 ಬಸ್‌ಗಳು ಮುಖಾಮುಖಿ ಢಿಕ್ಕಿ: 4 ಮಂದಿ ಮೃತ್ಯು, 70 ಜನರಿಗೆ ಗಾಯ
Update: 2023-06-19 18:33 IST

Photo: Twitter@NDTV
ಚೆನ್ನೈ: ಕಡಲೂರು ಜಿಲ್ಲೆಯಲ್ಲಿ ಸೋಮವಾರ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 4 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 70 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪನ್ರುತಿಯ ಮೇಲ್ಪಟ್ಟಂಪಕ್ಕಂನಲ್ಲಿ ನಡೆದ ಅಪಘಾತದಲ್ಲಿ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು.
ಅಪಘಾತಕ್ಕೆ ನಿಖರ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.