ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಶವ ನದಿಗೆ ಎಸೆದ ಪ್ರಕರಣ: ಓರ್ವನ ಬಂಧನ

Update: 2023-07-03 08:17 GMT

ಗುವಾಹಟಿ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ನಂತರ ಶವವನ್ನು ನದಿಗೆ ಎಸೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಗುವಾಹಟಿಯಲ್ಲಿರುವ ಕಮ್ರೂಪ್ (ಮೆಟ್ರೋ) ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ವರದಿಯಾಗಿದೆ.

8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಕಳೆದ ಸೋಮವಾರ ತನ್ನ ಫೋನ್ ಗೆ ರೀಚಾರ್ಜ್ ಮಾಡಲು ತೆರಳಿದ್ದು, ವಾಪಸ್ ಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಾಲಕಿಯ ಶವ ಶುಕ್ರವಾರ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದೆ. ಇದರಿಂದ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಶೀಘ್ರ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೀಗ ಆರೋಪಿ ಆಟೋ ರಿಕ್ಷಾ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Sathish

contributor

Byline - ವಾರ್ತಾಭಾರತಿ

contributor

Similar News