ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2023-06-21 13:00 GMT
ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ) ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವಿರಾದ ಝಮೀರ್ ಅಹಮದ್ ಖಾನ್, ಭೈರತಿ ಸುರೇಶ್ ಉಪಸ್ಥಿತರಿದ್ದರು.
ಇನ್ನು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸುವುದು ಸೇರಿದಂತೆ ರಾಜ್ಯದ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಅಲ್ಲದೆ, ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಇನ್ನಿತರ ಗಣ್ಯರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.