ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ: 34,000ಕ್ಕೂ ಅಧಿಕ ಜನರು ತತ್ತರ

Update: 2023-06-21 13:08 GMT

Photo: Twitter@NDTV 

ಗುವಾಹಟಿ: ಅಸ್ಸಾಂ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ 34,000 ಕ್ಕೂ ಹೆಚ್ಚು ಜನರು ಪ್ರವಾಹದಿಂದಾಗಿ ತತ್ತರಿಸಿದ್ದು, ಹಲವು ಸ್ಥಳಗಳಲ್ಲಿ ರಾತ್ರಿಯ ಮಳೆಯ ನಂತರ ಬುಧವಾರ ಬೆಳಿಗ್ಗೆ ಪ್ರವಾಹ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೂತಾನ್ ಸರಕಾರ ಮತ್ತು ಭಾರತೀಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳಲ್ಲಿ ಮೇಲಿನ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ ಬ್ರಹ್ಮಪುತ್ರ ಹಾಗೂ ಅದರ ಉಪನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಬಹುದು.

ಭೂತಾನ್‌ನ ಸರಕಾರವು ಹವಾಮಾನ ಸಲಹೆಯನ್ನು ನೀಡಿದೆ. ಅದರ ಪ್ರಕಾರ ಮುಂದಿನ 2-3 ದಿನಗಳಲ್ಲಿ ದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗಬಹುದು, ಇದು ಬ್ರಹ್ಮಪುತ್ರ ಮತ್ತು ಅದರ ಉಪನದಿಗಳಲ್ಲಿ ನೀರಿನ ಮಟ್ಟ ಸಂಭವನೀಯ ಏರಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

ಭೂತಾನ್ ಹಾಗೂ ಅಸ್ಸಾಂನ ಮೇಲ್ಭಾಗದ ಜಲಾನಯನ ಪ್ರದೇಶಗಳೆರಡರಲ್ಲೂ ನಿರಂತರ ಮಳೆಯಿಂದಾಗಿ ನೆರೆಯ ದೇಶದ ಕುರಿಚು ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡುವುತ್ತಿರುವುದರಿಂದ ರಾಜ್ಯದ ಪಶ್ಚಿಮ ಭಾಗದಲ್ಲಿ ನೀರಿನ ಮಟ್ಟ ಹಾಗೂ ಪ್ರವಾಹಗಳು ಹೆಚ್ಚುತ್ತಿವೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News