ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸಲು ರಾಜ್ಯಕ್ಕೆ ಮಣಿಪುರ ಹೈಕೋರ್ಟ್ ನಿರ್ದೇಶನ
Update: 2023-06-20 18:54 IST

Photo: ANI
ಗುವಾಹಟಿ: ಹಲವಾರು ವ್ಯಕ್ತಿಗಳು ಸಲ್ಲಿಸಿದ ಮನವಿಗಳ ನಂತರ ಮಣಿಪುರ ಹೈಕೋರ್ಟ್ ಇಂದು ನೀಡಿರುವ ಮಧ್ಯಂತರ ಆದೇಶದಲ್ಲಿ ತಮ್ಮ ನಿಯಂತ್ರಣದಲ್ಲಿರುವ ಕೆಲವು ಗೊತ್ತುಪಡಿಸಿದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸೀಮಿತ ಇಂಟರ್ನೆಟ್ ಸೇವೆಗಳನ್ನು ಒದಗಿಸುವಂತೆ ರಾಜ್ಯ ಅಧಿಕಾರಿಗಳಿಗೆ ಸೂಚಿಸಿದೆ.
ಹೈಕೋರ್ಟ್ ಜೂನ್ 23 ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದೆ.
"ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ, ವಿಶೇಷವಾಗಿ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತ್ತು ಸಾರ್ವಜನಿಕರಿಗೆ ಅವರ ತುರ್ತು ಮತ್ತು ಅಗತ್ಯ ಸೇವೆಗಳನ್ನು ಕೈಗೊಳ್ಳಲು ಅನುವು ಮಾಡಿಕೊಡಲು ರಾಜ್ಯ ಅಧಿಕಾರಿಗಳ ನಿಯಂತ್ರಣದಲ್ಲಿರುವ ಕೆಲವು ಗೊತ್ತುಪಡಿಸಿದ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಸೀಮಿತ ಇಂಟರ್ನೆಟ್ ಸೇವೆಯನ್ನು ಒದಗಿಸಲು ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’’ಎಂದು ಆದೇಶವು ತಿಳಿಸಿದೆ.