ಮಾದರಿ ಗ್ರಾಮ ಪಂಚಾಯಿತಿ ಅಧ್ಯಕ್ಷ: ದೆಹಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಹೆಚ್.ಎ ಹಂಸ ಕೊಟ್ಟಮುಡಿ
ಮಡಿಕೇರಿ: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12ಗ್ರಾಮ ಪಂಚಾತಿಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ನೀಡಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆದೇಶ ಹೊರಡಿಸಿದ್ದು, ಕೊಡಗು ಜಿಲ್ಲೆಯಿಂದ ಏಕೈಕ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ದೊರೆತಿದೆ.
ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಎ ಹಂಸ ಕೊಟ್ಟಮುಡಿ ಅವರನ್ನು ಭಾರತ, ಸರ್ಕಾರದ ಪಂಚಾಯತ್ ರಾಜ್ಯ ಸಚಿವಾಲಯದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರ ಹಂಸ ಕೊಟ್ಟಮುಡಿ ಅವರನ್ನು ದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಯ್ಕೆ ಮಾಡಿದ್ದು, ಹಂಸ ಅವರ ಪತ್ನಿ ಹೆಚ್.ಹೆಚ್ ಸಹೀರ ಅವರಿಗೆ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಇನ್ನುಳಿದಂತೆ ಕರ್ನಾಟಕದ ಹಾವೇರಿ,ಮೈಸೂರು, ಹಾಸನ,ಮಂಡ್ಯ,ಚಿತ್ರದುರ್ಗ, ಕೊಪ್ಪಳ,ಗದಗ,ಬೀದರ್, ಹಾಗೂ ಉಡುಪಿ ಜಿಲ್ಲೆಯಿಂದ ಇಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಮಾದರಿ ಗ್ರಾಮ ಪಂಚಾಯಿತಿ ಆಡಳಿತ
ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಮಾದರಿ ಆಡಳಿತದ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯಾಗಿದೆ. ಹೊದ್ದೂರು ಗ್ರಾಮ ಪಂಚಾಯಿತಿಯಲ್ಲಿ ಅಳವಡಿಸಿರುವ ಆಡಳಿತ ವ್ಯವಸ್ಥೆಯನ್ನು ಮೆಚ್ಚಿ ರಾಜ್ಯದ ಮತ್ತು ದೇಶದ ವಿವಿಧ ಭಾಗಗಳ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ಹೊದ್ದೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ,ಇಲ್ಲಿಯ ಆಡಳಿತ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ವಿಶೇಷವಾಗಿ ಕಳೆದ 25 ವರ್ಷಗಳಿಂದ ಗ್ರಾಮ ಪಂಚಾಯಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಹಂಸ ಕೊಟ್ಟಮುಡಿಯವರು ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಳಿಕ ಗ್ರಾಮ ಪಂಚಾಯಿತಿ ಮತ್ತಷ್ಟು ಅಭಿವೃದ್ಧಿಯತ್ತ ಸಾಗುತ್ತಿದೆ.
ವಸತಿ ರಹಿತರಿಗೆ ನಿವೇಶನ ಒದಗಿಸುವಲ್ಲಿ ಗ್ರಾಮ ಪಂಚಾಯಿತಿ ಎಲ್ಲರಿಗೂ ಮಾದರಿಯಾಗಿದೆ. ಅದಲ್ಲದೇ ಹಂಸ ಕೊಟ್ಟಮುಡಿ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದ ವಿಶೇಷ ಹಾಗೂ ಶಾಸಕರ ವಿಶೇಷ ಅನುದಾನ ಕೂಡ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕೆಲಸಗಳಿಗೆ ಒದಗಿಬಂದಿದೆ. ಇದೀಗ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯು ರಾಷ್ಟ್ರಮಟ್ಟದಲ್ಲಿ ಜನಮನ್ನಣೆಗಳಿಸಿದ್ದು,ಅತ್ಯುತ್ತಮ ಮಾದರಿ ಆಡಳಿತವನ್ನು ಅಳವಡಿಸಿಕೊಂಡು ಇಡೀ ರಾಜ್ಯಕ್ಕೆ ಹೊದ್ದೂರು ಗ್ರಾಮ ಪಂಚಾಯಿತಿ ಮಾದರಿಯಾಗಿದೆ.
ಹೊದ್ದೂರು ಗ್ರಾಮ ಪಂಚಾಯಿತಿಯು,ಬಡರವ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಸತಿ ರಹಿತರಿಗೆ ನಿವೇಶನವನ್ನು ಒದಗಿಸಿಕೊಟ್ಟಿದ್ದೇವೆ. ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ. ವಿಶೇಷವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ಗ್ರಾಮ ಪಂಚಾಯಿಗೆ ಎಲ್ಲಾ ರೀತಿಯ ಸಹಕಾರ ಮತ್ತು ಅನುದಾನವನ್ನು ನೀಡುತ್ತಿದ್ದಾರೆ. ಜಿಲ್ಲೆಯಿಂದ ಏಕೈಕ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವಿಶೇಷ ಅತಿಥಿಯಾಗಿ ಭಾಗವಹಿಸಲು ಅವಕಾಶ ದೊರೆತಿದೆ. ನನ್ನೊಂದಿಗೆ ನನ್ನ ಪತ್ನಿಗೆ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸದಸ್ಯರು ಮತ್ತು ಸಿಬ್ಬಂದಿ ವರ್ಗದವರಿಗೆ ವಿಶೇಷ ಧನ್ಯವಾದಗಳನ್ನ ಸಲ್ಲಿಸುತ್ತಿದ್ದೇನೆ.
ಹೆಚ್.ಎ ಹಂಸ ಕೊಟ್ಟಮುಡಿ ಅಧ್ಯಕ್ಷರು ಹೊದ್ದೂರು ಗ್ರಾಮ ಪಂಚಾಯಿತಿ, ವಿಶೇಷ ಅತಿಥಿ ಗಣರಾಜ್ಯೋತ್ಸವ ಕಾರ್ಯಕ್ರಮ ದೆಹಲಿ.
ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್.ಎ ಹಂಸ ಅವರು ವಿಶೇಷ ಅತಿಥಿಯಾಗಿ ಭಾಗವಹಿಸುತ್ತಿರುವುದು ಹೆಮ್ಮೆ ತಂದಿದೆ.
ಹೊದ್ದೂರು ಗ್ರಾಮ ಪಂಚಾಯಿತಿ ಎಲ್ಲರಿಗಿಂತಲೂ ವಿಭಿನ್ನವಾಗಿ ಆಡಳಿತ ವ್ಯವಸ್ಥೆಯನ್ನು ಜಾರಿ ಮಾಡಿ,ಕಾರ್ಯನಿರ್ವಹಿಸುತ್ತಿದ್ದೇವೆ.ಅಧ್ಯಕ್ಷರಾದ ಹೆಚ್.ಎ ಹಂಸ ಕೊಟ್ಟಮುಡಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಮಟ್ಟದಲ್ಲಿ ಪ್ರಭಾವಿಯಾಗಿ ಗ್ರಾಮ ಪಂಚಾಯಿತಿಗೆ ಬೇಕಾದ ಅನುದಾನವನ್ನು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಎ.ಎ ಅಬ್ದುಲ್ಲಾ,ಅಭಿವೃದ್ಧಿ ಅಧಿಕಾರಿ ಹೊದ್ದೂರು ಗ್ರಾಮ ಪಂಚಾಯಿತಿ.
ಹೊದ್ದೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದಾಗ ಗ್ರಾಮ ಆಡಳಿತದ ಬಗ್ಗೆ ಹೆಮ್ಮೆ ಅನಿಸಿದೆ. ಸುಸಜ್ಜಿತವಾದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಕಾರ್ಯನಿರ್ವಹಿಸುತ್ತಿದೆ. ಜನಸ್ನೇಹಿ ಕಾರ್ಯಕ್ರಮದ ಮೂಲಕ ಹೊದ್ದೂರು ಗ್ರಾಮ ಪಂಚಾಯಿತಿಯು ಎಲ್ಲರಿಗೂ ಮಾದರಿಯಾಗಿದೆ. ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಕೂಡ ಹೊದ್ದೂರು ಗ್ರಾಮ ಪಂಚಾಯಿತಿ ಮಾದರಿಯಲ್ಲಿಯೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇವೆ. ಹೊದ್ದೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ನಮಗೆಲ್ಲರಿಗೂ ಮಾದರಿಯಾಗಿದೆ.
ನಾಗರತ್ನ ಅಧ್ಯಕ್ಷರು, ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ತಾಲ್ಲೂಕಿನ ತುರುವನೂರು ಗ್ರಾಮ ಪಂಚಾಯತಿ.