ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ

Update: 2024-02-16 18:44 IST
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ ಅಂಜಾರಿಯಾ ನೇಮಕ

Photo: ಎನ್.ವಿ.ಅಂಜಾರಿಯಾ (barandbench.com)

  • whatsapp icon

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್​​ನ ಹಿರಿಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಹಾಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಕರ್ನಾಟಕದವರೇ ಆದ ಪಿ.ಎಸ್.ದಿನೇಶ್ ಕುಮಾರ್ ಇದೇ ತಿಂಗಳು (ಫೆಬ್ರವರಿ) 24ರಂದು ನಿವೃತ್ತಿ ಆಗಲಿದ್ದಾರೆ. ಅವರಿಂದ ತೆರವಾಗುವ ಹುದ್ದೆಗೆ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ನೇಮಕ ಮಾಡಲು ಸರ್ವೋಚ್ಚ ನ್ಯಾಯಾಲಯ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು.ಹೀಗಾಗಿ ಇಂದು ಹೈಕೋರ್ಟ್ ನೂತನ ಸಿಜೆ ಸ್ಥಾನಕ್ಕೆ ಅಂಜಾರಿಯಾರನ್ನು ನೇಮಕ ಮಾಡಿ ಕೇಂದ್ರ ಸರಕಾರ ಆದೇಶಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News