ಪುತ್ತೂರು: ಕಾರು -ಸ್ಕೂಟರ್‌ ಅಪಘಾತ; ಓರ್ವ ಮೃತ್ಯು

Update: 2023-06-21 07:32 GMT

ಪುತ್ತೂರು: ಕಾರು ಹಾಗು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ 7ಗಂಟೆ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ನೈತಾಡಿಯ ಇಸ್ಮಾಯಿಲ್ ಯಾನೆ ಉಸ್ಮಾನ್ (58) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್‌ ನಜ್ಜುಗುಜ್ಜಾಗಿದೆ.ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮೃತ ಇಸ್ಮಾಯಿಲ್‌ ಪತ್ನಿ, ಓರ್ವ ಮಗ ಹಾಗೂ ಮೂರು ಹೆಣ್ಣು ಮಕ್ಕಳನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News