ರಾಯಚೂರು ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ 1,119 ವಿದ್ಯಾರ್ಥಿಗಳು ಗೈರು
Update: 2025-03-21 18:18 IST

ಸಾಂದರ್ಭಿಕ ಚಿತ್ರ
ರಾಯಚೂರು : ಜಿಲ್ಲೆಯಲ್ಲಿ ಶುಕ್ರವಾರದಿಂದ ಆರಂಭಗೊಂಡ ಎಸೆಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆದಿದೆ.
97 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 1,119 ವಿದ್ಯಾರ್ಥಿಗಳು ಗೈರಾಗಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 31,617 ವಿದ್ಯಾರ್ಥಿಗಳ ಪೈಕಿ 30,498 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತವೆಂದು ಘೋಷಿಸಲಾಗಿತ್ತು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.