ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರನ್ನು ಭೇಟಿಯಾದ ರಾಯಚೂರು ವಿವಿ ಸಿಂಡಿಕೇಟ್ ಸದಸ್ಯರ ನಿಯೋಗ

Update: 2024-11-11 15:40 GMT

ಡಾ.ಎಂ.ಸಿ.ಸುಧಾಕರ್

ಬೆಂಗಳೂರು : ರಾಯಚೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ನಿಯೋಗವು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ, ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ಮತ್ತು ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಮನವಿ ಪತ್ರ ನೀಡಿ ಚರ್ಚಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆಯಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಶೈಕ್ಷಣಿಕ ಉನ್ನತಿಗಾಗಿ ಹಾಗೂ ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಲಭಿಸುವಿಕೆಗಾಗಿ ಸ್ಥಾಪಿತವಾದ ರಾಯಚೂರು ವಿಶ್ವವಿದ್ಯಾಲಯದಲ್ಲಿ ವಿವಿಧ ಬೇಡಿಕೆಯ ಕೋರ್ಸುಗಳನ್ನು ಆರಂಭಿಸಲು ಹಾಗೂ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸಲು ಅನುದಾನದ ಅಗತ್ಯವಿದ್ದು, ರಾಯಚೂರು ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ ನೀಡುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ಮತ್ತು ಕಲಿಕಾ ಪೂರಕ ವಾತಾವರಣ ಒದಗಿಸಬೇಕೆಂದು ಮೂರು ಜನ ಸಿಂಡಿಕೇಟ್ ಸದಸ್ಯರ ನಿಯೋಗದಲ್ಲಿ ವಕೀಲರಾದ ಶಿವಣ್ಣ, ಡಿ.ಆರ್. ಚಿನ್ನ ಮತ್ತು ಜಿಶಾನ್ ಆಖಿಲ್ ಸಿದ್ದಿಕಿ ರವರು ಮನವಿ ನೀಡಿದ್ದಾರೆ.

ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರದಲ್ಲೇ ವಿವಿಯ ಪ್ರಗತಿಯ ಕುರಿತು ವಿಶೇಷ ಕಾರ್ಯಯೋಜನೆಗಳನ್ನು ನಡೆಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News