ಜಾತಿಗಣತಿ ವರದಿ | ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆ ಪರಿಶೀಲನೆ : ಸಿಎಂ ಸಿದ್ದರಾಮಯ್ಯ

Update: 2024-10-05 07:47 GMT

ರಾಯಚೂರು: "ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಒಳ ಮೀಸಲಾತಿಗೆ ನಮ್ಮ ಸರಕಾರದ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು" ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ :

ರಾಜ್ಯದ ಕಾಂಗ್ರೆಸ್‌ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ :

ಜೆಡಿಎಸ್‌ನ ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ʼಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ, ವಿರೋಧಪಕ್ಷದವರು ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರುʼ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News