ಆರೋಗ್ಯ ಕೇಂದ್ರಗಳಿಗೆ ತಜ್ಞ ವೈದ್ಯರ ನೇಮಕಕ್ಕೆ ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್
Update: 2025-03-15 20:04 IST

ಸಚಿವ ದಿನೇಶ್ ಗುಂಡೂರಾವ್
ರಾಯಚೂರು: ಈ ವರ್ಷ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
ಶನಿವಾರ ಮಾನ್ವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು, ಕಲಬುರಗಿ ಹಾಗೂ ಬಳ್ಳಾರಿ ಪ್ರದೇಶದಲ್ಲಿ ಬಿಸಿಲಿನ ತಾಪ ಹೆಚ್ಚಿರುವ ಪ್ರದೇಶಗಳಾಗಿವೆ.
ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಅತಿ ಹೆಚ್ಚು ಬಿಸಿಲಿರುವ ಅವಧಿಯಾಗಿದೆ. ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಎಂದು ತಿಳಿಸಿದರು.
ಶಾಲೆಗಳು ಹಾಗೂ ಸಂಸ್ಥೆಗಳ ಈ ಬಗ್ಗೆ ಗಮನಹರಿಸಬೇಕು. ಸರ್ಕಾರ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ನಿಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ತಜ್ಞ ವೈದ್ಯರಿಗೆ ಹೆಚ್ಚಿನ ವೇತನ ನೀಡಿ ಸೇವೆ ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.