ಉಗ್ರರು ಎಲ್ಲೇ ಅಡಗಿದ್ದರೂ ಅವರನ್ನು ಮಟ್ಟ ಹಾಕುವ ಶಕ್ತಿ ಭಾರತಕ್ಕಿದೆ : ಬಿ.ವೈ.ವಿಜಯೇಂದ್ರ

Update: 2025-04-23 20:15 IST
ಉಗ್ರರು ಎಲ್ಲೇ ಅಡಗಿದ್ದರೂ ಅವರನ್ನು ಮಟ್ಟ ಹಾಕುವ ಶಕ್ತಿ ಭಾರತಕ್ಕಿದೆ : ಬಿ.ವೈ.ವಿಜಯೇಂದ್ರ
  • whatsapp icon

ರಾಯಚೂರು: ಜಮ್ಮು-ಕಾಶ್ಮೀರದಲ್ಲಿ ನಡೆದ ದುರ್ಘಟನೆ ಖಂಡನೀಯವಾಗಿದ್ದು, ನಾಳೆ, ನಾಡಿದ್ದು ನಡೆಯಬೇಕಾದ ಜನಾಕ್ರೋಶ ಯಾತ್ರೆಯನ್ನು ಮುಂದೂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ ಇಂದು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಉತ್ಸಾಹದಿಂದ ಕಾರ್ಯಕ್ರಮಕ್ಕೆ ಬಂದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಅಂತ್ಯಕ್ರಿಯೆಯಲ್ಲಿ ನಾಳೆ ನಾನು ಭಾಗವಹಿಸಲಿದ್ದೇನೆ ಎಂದು ತಿಳಿಸಿದರು.

ಉಗ್ರರು ಎಲ್ಲೇ ಅಡಗಿದ್ದರೂ, ಯಾವುದೇ ದೇಶದ ಕುಮ್ಮಕ್ಕು ಇದ್ದರೂ, ಅದನ್ನು ಮಟ್ಟ ಹಾಕುವ ಶಕ್ತಿ ಭಾರತಕ್ಕಿದೆ. ದೇಶದಲ್ಲಿ ನರೇಂದ್ರ ಮೋದಿಜೀ ಅವರು ಪ್ರಧಾನಿಯಾಗಿದ್ದಾರೆ ಎಂಬುದೇ ಈ ವಿಶ್ವಾಸಕ್ಕೆ ಕಾರಣ ಎಂದು ತಿಳಿಸಿದರು.

ಜಮ್ಮು- ಕಾಶ್ಮೀರದ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯದಿಂದ ಕೂಡಲೇ ವಾಪಸ್ ಬಂದಿದ್ದಾರೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ಜೀ ಅವರು ಕೂಡ ಜಮ್ಮು- ಕಾಶ್ಮೀರಕ್ಕೆ ಧಾವಿಸಿದ್ದಾರೆ. ರಾಜ್ಯದ 28 ಜನರು ಈ ದುಷ್ಕೃತ್ಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ಮಾನಪ್ಪ ಡಿ.ವಜ್ಜಲ್, ರಾಯಚೂರು ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News