ಕರ್ನಾಟಕ ಬಂದ್‌ಗೆ ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ರಾಯಚೂರು: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರರು ನಡೆಸುವ ದೌರ್ಜನ್ಯ, ದಬ್ಬಾಳಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಯಚೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ಬಂದ್ ಗೆ ನಗರದ ಉಸ್ಮಾನಿಯಾ ತರಕಾರಿ ಮಾರುಕಟ್ಟೆಯ ವ್ಯಾಪಾರಸ್ಥರು ಸಂಪೂರ್ಣವಾಗಿ ಬೆಂಬಲ ನೀಡಿದ್ದರಿಂದ ಮಾರುಕಟ್ಟೆ ಬಂದ್ ಮಾಡಲಾಯಿತು.
ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ವ್ಯವಸ್ಥೆ ಇದ್ದರೂ, ಅನೇಕ ಬಸ್ ಓಡಾಟ ಕಡಿಮೆಯಿತ್ತು. ಶ್ರೀಶೈಲಂಗೆ ಹೋಗುವ ಯಾತ್ರಿಕರು, ಎಸೆಸೆಲ್ಸಿ ಪರೀಕ್ಷೆ ಇರುವುದರಿಂದ ಯಾವುದೇ ಸಮಸ್ಯೆಯಾಗಿಲ್ಲ. ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕೊರತೆಯಾಗಿಲ್ಲ. ಬಟ್ಟೆ ಬಝಾರ್, ಮೀನಾ ಬಝಾರ್ ನಲ್ಲಿ ಕೆಲ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ನೀಡಿದರು.
ಉಳಿದಂತೆ ಎಂದಿನಂತೆ ಯಥಾ ರೀತಿಯಲ್ಲಿ ಯಾವುದೇ ಸೌಲಭ್ಯಕ್ಕೆ ವ್ಯತ್ಯಯವಾಗಿಲ್ಲ.
ಕನ್ನಡಪರ ಸಂಘಟನೆಗಳ ಮುಖಂಡರಿಂದ ನಗರದ ಹಲವೆಡೆ ಬೈಕ್ ರ್‍ಯಾಲಿ ನಡೆಸಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.