ಏಮ್ಸ್ ಹೋರಾಟ ಸಮಿತಿಯೊಂದಿಗೆ ಖರ್ಗೆಯವರನ್ನು ಭೇಟಿಯಾದ ಸಂಸದ ಜಿ ಕುಮಾರ ನಾಯಕ
Update: 2025-03-21 14:21 IST

ರಾಯಚೂರು:
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆರವರನ್ನು ರಾಯಚೂರು ಏಮ್ಸ್ ಹೋರಾಟ ಸಮಿತಿಯ ನಿಯೋಗದೊಂದಿಗೆ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕರವರು ಇಂದು ನವದೆಹಲಿಯಲ್ಲಿ ಭೇಟಿಯಾdrṳ
ರಾಯಚೂರಿಗೆ ಏಮ್ಸ್ ಆಸ್ಪತ್ರೆಯನ್ನು ಮಂಜೂರು ಮಾಡಲು ಹಿಂದೇಟು ಹಾಕುತ್ತಿರುವ ಕೇಂದ್ರ ಆರೋಗ್ಯ ಸಚಿವರಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ಈ ವಿಷಯದ ಬಗ್ಗೆ ಚರ್ಚಿಸಿ, ಈ ಭಾಗದ ಜನರ ಆರೋಗ್ಯ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಡಾ,ಬಸವರಾಜ ಕಳಸ, ಉದಯ ಕುಮಾರ ಸಾಹುಕಾರ್ ಸೇರಿದಂತೆ ಹೋರಾಟ ಸಮಿತಿಯ ಅನೇಕ ಸದಸ್ಯರು ಉಪಸ್ಥಿತರಿದ್ದರು.