ಮಸ್ಕಿ: ಟ್ರ್ಯಾಕ್ಟರ್ ಪಲ್ಟಿ;ಮಹಿಳೆ ಮೃತ್ಯು,15 ಮಂದಿಗೆ ಗಾಯ
Update: 2025-04-25 14:05 IST

ರಾಯಚೂರು:ಕೂಲಿ ಕೆಲಸಕ್ಕೆ ಹೋಗಿ ಬರುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಜನರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕೂಲಿ ಕೆಲಸ ಮುಗಿಸಿ ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಘಟನೆಯಲ್ಲಿ ಅಂಬಮ್ಮ(46) ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಅಪಘಾತದಲ್ಲಿ 6 ಜನ ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕೂಡಲೇ ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.