ರಾಯಚೂರು: ದಲಿತಪರ ಸಂಘಟನೆಗಳಿಂದ ಅಮಿತ್ ಶಾ ವಿರುದ್ಧ ಪ್ರತಿಭಟನೆ

Update: 2024-12-27 15:30 GMT

ರಾಯಚೂರು: ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾನಿರತರು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಅವರ ಕುರಿತು ಸಂಸತ್ತಿನಲ್ಲಿ ಮಾತನಾಡುವಾಗ ಅಂಬೇಡ್ಕರ್ ಅವರನ್ನು ವ್ಯಂಗ್ಯವಾಡಿದ್ದಾರೆ. ಅಂಬೇಡ್ಕರ್ ಅವರ ಹೆಸರು ಹೇಳುವುದು ವ್ಯಸನವಾಗಿದೆ ಎಂದು ಹೇಳಿದ್ದು ಖಂಡನಾರ್ಹ. ದಲಿತರಿಗೆ, ಮಹಿಳೆಯರಿಗೆ ಹಾಗೂ ಸೋಷಿತ ವರ್ಗಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರು ದಾರಿದೀಪವಾಗಿದ್ದಾರೆ. ಅವರ ಹೆಸರೇ ನಮಗೆ ಸ್ಪೂರ್ತಿ. ನಮ್ಮೆಲ್ಲರಿಗೆ ಅವರೇ ದೇವರು, ಅವರ ಸ್ಮರಣೆ ನಿತ್ಯ ಮಾಡುತ್ತೇವೆ ಎಂದು ಎಸ್ ಮಾರೆಪ್ಪ ಹೇಳಿದರು.

ಅಂಬೇಡ್ಕರ್ ಅವರ ಅವಹೇಳನ ದೇಶದಲ್ಲಿ ಕೂಮು ಪ್ರಚೋದನೆಗೆ ಕಾರಣವಾಗಬಹುದು. ಕೂಡಲೇ ಅಮಿತ್ ಶಾ ಅವರನ್ನು ಕೇಂದ್ರ ಗೃಹ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರಾದ ರವೀಂದ್ರ ನಾಥ ಪಟ್ಟಿ, ಹೇಮರಾಜ ಅಸ್ಕಿಹಾಳ, ಎಂ.ಈರಣ್ಣ, ಆಂಜನೇಯ ಊಟ್ಕೂರು, ನರಸಿಂಹಲು ಮರ್ಚಟಾಳ, ಶ್ರೀನಿವಾಸ ಕಲವಲದೊಡ್ಡಿ, ವಿಜಯರಾಣಿ, ಖಾಜಾ ಅಸ್ಲಂಪಾಷಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News