ರಾಯಚೂರು : ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
Update: 2024-11-08 16:43 GMT
ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಾಗರ್ ಕ್ಯಾಂಪ್ನ ಕಾಲುವೆಯೊಂದರಲ್ಲಿ ಅಪರಿಚಿತ ಗಂಡು ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ.
ಈ ನವಜಾತ ಶಿಶುವಿನ ಮೃತದೇಹವನ್ನು ಪಾದಚಾರಿಯೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ನವಜಾತ ಶಿಶುವಿನ ಮೃತದೇಹವನ್ನು ಶವಾಗಾರ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಳಗಾನೂರು ಪೊಲೀಸರು ಪರಿಶೀಲಿನೆ ನಡೆಸಿ, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.