ರಾಯಚೂರು | ಭತ್ತ ಕಟಾವು ಯಂತ್ರಕ್ಕೆ 2,450 ರೂ. ಬಾಡಿಗೆ ನಿಗದಿ : ಜಿಲ್ಲಾಧಿಕಾರಿ ನಿತೀಶ್ ಕೆ.

Update: 2024-12-10 15:35 GMT

ರಾಯಚೂರು : ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2,450 ರೂ. ಮೀರದಂತೆ ಬಾಡಿಗೆ ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 1,85,378 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಈಗಾಗಲೇ ಹಲವೆಡೆ ಕಟಾವು ಪ್ರಾರಂಭವಾಗಿದೆ. ಶೇ.95ರಷ್ಟು ರೈತರು ಭತ್ತದ ಬೆಳೆಯನ್ನು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದಾರೆ. ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಎಲ್ಲಾ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲಕರು ರೈತರಿಂದ ಪ್ರತಿ ಗಂಟೆಗೆ 2,500 ರೂ. ರಿಂದ 3,000 ರೂ. ವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ರೈತರಿಂದ ಹಾಗೂ ಜನಪ್ರತಿನಿಧಿಗಳಿಂದ ದೂರು ಬಂದಿದೆ ಎಂದು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಕಾರಣ ಜಿಲ್ಲೆಯ ಭತ್ತ ಕಟಾವು ಯಂತ್ರದ ಮಾಲಕರು. ಈ ದರಕ್ಕೆ ಮೀರದಂತೆ ಭತ್ತ ಕಟಾವು ಕೈಗೊಳ್ಳಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News