×
Ad

ರಾಯಚೂರು | ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ 6ನೇ ತರಗತಿಯ ಪ್ರವೇಶ ಪರೀಕ್ಷೆ : ಹಾಲ್ ಟಿಕೇಟ್ ಡೌನ್‌ಲೋಡ್ ಮಾಡಲು ಸೂಚನೆ

Update: 2025-04-23 18:40 IST

ಸಾಂದರ್ಭಿಕ ಚಿತ್ರ

ರಾಯಚೂರು : 2025–26ನೇ ಶೈಕ್ಷಣಿಕ ವರ್ಷಕ್ಕಾಗಿ ರಾಯಚೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಎ.27ರಂದು ಆಯೋಜಿಸಲಾಗಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು (ಹಲ್ ಟಿಕೆಟ್) ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರವೇಶಾತಿಗೆ ಅರ್ಹತೆ ಹೊಂದಿರುವವರು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧಿಸ್ಟ್, ಸಿಖ್ ಹಾಗೂ ಪಾರ್ಸಿ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆಗಿರಬೇಕು. ಈ ಹಿಂದೆ ಅರ್ಜಿ ಸಲ್ಲಿಕೆಯು ಸೇವಾಸಿಂಧು ಜಾಲತಾಣ https://sevasindhuservices.karnataka.gov.in ಮೂಲಕ ಆಹ್ವಾನಿಸಲ್ಪಟ್ಟಿತ್ತು.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಸಹಾಯವಾಣಿ ಹಾಗೂ ಇಲಾಖೆಯ ಇಲಾಖಾಧಿಕಾರಿಗಳನ್ನು ಸಂಪರ್ಕಿಸಲು ದೂರವಾಣಿ ಸಂಖ್ಯೆಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಪಸಂಖ್ಯಾತರ ಸಹಾಯವಾಣಿ: 8277799990, 9663333135, 9535808084, ರಾಯಚೂರು ಜಿಲ್ಲಾ ಕಚೇರಿ: 8496098631, 9731028420, 9731341815, 9686853719, 6361866571, 9108175899, 9902906266, ಮಾನವಿ, ಸಿರವಾರ: 7411771075, 886733478 ದೇವದುರ್ಗ: 9731794252, 9148233616, ಲಿಂಗಸೂಗೂರು, ಮಸ್ಕಿ, ಸಿಂಧನೂರು: 8217621732, 9740871306, 8660879712 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News