ರಾಯಚೂರು | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

Update: 2024-12-13 13:01 GMT

ಸಾಂದರ್ಭಿಕ ಚಿತ್ರ(PC : Meta AI)

ರಾಯಚೂರು : ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 2019ರಲ್ಲಿ ನಡೆದಿದ್ದ ಅಪ್ರಾಪ್ರೆ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಲಿಂಗಸೂಗೂರು ತಾಲೂಕಿನ ಗೋನವಾಟ್ಲಾ ಗ್ರಾಮದ ನಿವಾಸಿ ಹುಲ್ಲೇಶ (25) ಶಿಕ್ಷೆಗೆ ಗುರಿಯಾದ ಆರೋಪಿ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಅಂದಿನ ಸಿಪಿಐ ಯಶವಂತ್ ಎಚ್.ಬಿಸ್ನಳ್ಳಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯವು ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ, ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿರುವ ಹಿನ್ನೆಲೆಯಲ್ಲಿ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು15,000 ರೂ. ದಂಡ ವಿಧಿಸಲಾಗಿದೆ. ಸರಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 4,50,000 ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News