ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ 10 ಕೋಟಿ ರೂ. ವಂಚಿಸಿದ್ದ ಆರೋಪಿ ಬ್ಯಾಂಕ್ ಮ್ಯಾನೇಜರ್ ಸೆರೆ
Update: 2025-04-07 22:13 IST

ಬಂಧಿತ ಆರೋಪಿ
ರಾಯಚೂರು : ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ರೂ. ವಂಚಿಸಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಬ್ಯಾಂಕ್ ಮ್ಯಾನೇಜರ್ ನರೇಂದ್ರರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಕ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ ನಕಲಿ ದಾಖಲೆಯ ಮೂಲಕ 105 ಖಾತೆಗಳನ್ನು ಸೃಷ್ಟಿಸಿ 10 ಕೋಟಿ 97 ಲಕ್ಷ ರೂ. ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಕಲಿ ಗೋಲ್ಡ್ ಲೋನ್ ಖಾತೆಗಳಿಂದ 8 ಸಂಬಂಧಿಕರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದ್ದನು. ಅಲ್ಲದೇ ಹಿಂದಿನ ಬ್ಯಾಂಕ್ ಸಹೋದ್ಯೋಗಿ ಹೆಸರಿಗೆ 88 ಲಕ್ಷ ವರ್ಗಾವಣೆ ಮಾಡಿದ್ದ ಎಂದು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರ ತನಿಖಾ ತಂಡ ಬಂಧಿಸಿ 97 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.