ರಾಯಚೂರು | ಕೋಠಾ ಗ್ರಾಮ ಪಂಚಾಯತ್‌ನ ಅವ್ಯವಹಾರ ಆರೋಪ : ತನಿಖೆಗೆ ಆಗ್ರಹ

Update: 2024-12-03 16:34 GMT

ರಾಯಚೂರು : ಲಿಂಗಸೂಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯತ್‌ನಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಅಕ್ರಮ ಎಸಗಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯಿಂದ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕರಿಗೆ ಮನವಿ ಸಲ್ಲಿಸಿದರು.

ಗ್ರಾಮ ಪಂಚಾಯತಿಯ ಇಬ್ಬರು ಸದಸ್ಯರು ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ತಮ್ಮ ಹೆಸರಿನಲ್ಲಿ ಆಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸದಸ್ಯರಿಂದಲೇ ಭಾರೀ ಅವ್ಯವಹಾರ ನಡೆದಿದ್ದು, ಸರಕಾರದ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಮೇದನಾಪೂರ ಗ್ರಾಮದಲ್ಲಿ ಗ್ರಾಮ ಪಂಚಾಯತ್‌ನ ನಿಯಮಾವಳಿಗಳನ್ನು ಗಾಳಿಗೆ ತೂರಿ, ಯಾವುದೇ ಗ್ರಾಮಸಭೆಯನ್ನು ಕರೆಯದೆ ತಮ್ಮ ದಾಖಲೆಗಳನ್ನು ತಾವೇ ಸೃಷ್ಟಿಸಿಕೊಂಡು ಅಧಿಕಾರಲೋಪ ಎಸಗಲಾಗಿದೆ ಎಂದು ದೂರಿದರು. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಸದಸ್ಯತ್ವ ಮತ್ತು ಅಧಿಕಾರ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ಕೊಂಡಪ್ಪ ಕೆ., ವೀರೇಶ್ ಜಲಗಾರ, ಎಂ.ಎಸ್.ವೆಂಕಟೇಶ, ನರಸಿಂಹಲು ಕುರುಬದೊಡ್ಡಿ ಸೇರಿದಂತೆ ಇತರರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News