ರಾಯಚೂರು | ಪಿಡಿಒ ಪರೀಕ್ಷೆಯಲ್ಲಿ ಎಡವಟ್ಟು ಆರೋಪ: ಪ್ರತಿಭಟನೆ ನಡೆಸಿದ 12 ಮಂದಿಯ ವಿರುದ್ಧ ಪ್ರಕರಣ ದಾಖಲು

Update: 2024-11-18 06:09 GMT

ರಾಯಚೂರು: ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ವಿಳಂಬ ಮಾಡಿ ಪ್ರಶ್ನಪತ್ರಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಭಂದಿಸಿ 12 ಅಭ್ಯರ್ಥಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ರವಿವಾರ ಸಿಂಧನೂರು ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆ ಪತ್ರಿಕೆ ವಿಳಂಬವಾಗಿ ನೀಡಿದ್ದನ್ನು ಖಂಡಿಸಿ ಪರೀಕ್ಷಾ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿ ಕೆಪಿಎಸ್ ಸಿ ಮಾಡಿಕೊಂಡಿರುವ ಎಡವಟ್ಟಿನ ವಿರುದ್ಧ ಹಲವರು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು.

ಸಿಂಧನೂರು ಪಟ್ಟಣದ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಅವ್ಯವಸ್ಥೆ ಕುರಿತು ವಿರೋಧ ವ್ಯಕ್ತಪಡಿಸಿದ ಪರೀಕ್ಷಾರ್ಥಿಗಳು ಧಿಡೀರ್ ರಸ್ತೆ ತಡದು ಪ್ರತಿಭಟನೆ ನಡಸಿ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಬಸವರಾಜ ತಡಕಲ್ ನೀಡಿದ ದೂರಿನ ಮೇರೆಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಭ್ಯರ್ಥಿಗಳಿಗೆ ಆಗಿರುವ ತೊಂದರೆ ನಿವಾರಿಸುವ ಬದಲು ಪ್ರಕರಣ ದಾಖಲಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ದೂರು ದಾಖಲಿಸಿದವರ ಹಾಗೂ ಕೆಎಇ ವಿರುದ್ದ ಕೇಸ್ ದಾಖಲಿಸಲು ಅಭ್ಯಥಿಗಳು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News