ರಾಯಚೂರು | ಅಮಿತ್ ಶಾ ಗಡಿಪಾರಿಗೆ ಛಲವಾದಿ ಸಮಾಜದಿಂದ ಆಗ್ರಹ

Update: 2024-12-20 10:44 GMT

ರಾಯಚೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಮಹಿಳಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಅಮಿತ್ ಶಾ ಅವರು ಮಾತನಾಡುವಾಗ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು.

ʼಅಂಬೇಡ್ಕರ್ ಹೆಸರು ಹೇಳುವುದು ಈಗ ಶೋಕಿ ಆಗಿಬಿಟ್ಟಿದೆ, ಇಷ್ಟೊಂದು ಬಾರಿ ದೇವರು ಹೆಸರು ಹೇಳಿದ್ದರೆ ಏಳು ಜನ್ಮಗಳವರೆಗೆ ಸ್ವರ್ಗ ಪ್ರಾಪ್ತಿ ಆಗುತ್ತಿತ್ತುʼ ಎಂದು ಲೋಕಸಭಾ ಕಲಾಪದಲ್ಲಿ ನಾಲಿಗೆ ಹರಿಬಿಟ್ಟು ಬಾಬಾ ಸಾಹೇಬರಿಗೆ ಅವಮಾನ ಮಾಡುವ ಮೂಲಕ ರಾಷ್ಟ್ರದ್ರೋಹ ಕೃತ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಹೇಳಿಕೆ ಕೋಮು ಗಲಭೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಸಂವಿಧಾನ ಅಡಿಯಲ್ಲಿ ಬಹುದೊಡ್ಡ ಜವಾಬ್ದಾರಿ ವಹಿಸಿಕೊಂಡ ಕೇಂದ್ರ ಗೃಹ ಸಚಿವ ಈ ರೀತಿ ಅಂಬೇಡ್ಕರ್ ಅಪಮಾನ ಮಾಡಿ ತಮ್ಮ ಸ್ಥಾನಕ್ಕೆ ಅಗೌರವ ತಂದುಕೊಂಡಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಈರಮ್ಮ, ಲಲಿತಾ ಆರೋಲೀ ಕರ್, ಅರ್ಚನಾ ಸುಂಕಾರಿ, ಸುಜಾತಾ ದಾದಾಸ್, ನಾಗರತ್ನ, ಲಕ್ಷ್ಮಿ, ಸಾವಿತ್ರಿ, ಪ್ರಿಯದರ್ಶಿನಿ ನಂದಿನಿ, ಮೀನಾಕ್ಷಿ ಸೇರಿದಂತೆ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News