ರಾಯಚೂರು | 6ನೇ ತರಗತಿಗೆ ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
Update: 2025-04-10 15:03 IST

ರಾಯಚೂರು : ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಮೇ.3ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ವಿಳಾಸ: www.sw.kar.nic.in ಗೆ ಭೇಟಿ ನೀಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.