ರಾಯಚೂರು | ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ
ರಾಯಚೂರು : ಇಲ್ಲಿನ ಜಂಟಿ ಕೃಷಿ ನಿರ್ದೇಶಕ ಕಚೇರಿಯಿಂದ 2024-25ನೇ ಸಾಲಿನಲ್ಲಿ ಯಾಂತ್ರೀಕರಣ ಯೋಜನೆಯಡಿ ಹೆಚ್ಚುವರಿ ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ ಶೇ.50ರಂತೆ ಪರಿಶಿಷ್ಟ ಜಾತಿ ವರ್ಗದ ರೈತರಿಗೆ ಗರಿಷ್ಟ ಶೇ.70 ನೀಡಲಾಗುವುದು. ರಾಯಚೂರು ಜಿಲ್ಲೆಗೆ ಸಾಮಾನ್ಯ ವರ್ಗದಡಿ ವೈಯಕ್ತಿಕ ಫಲಾನುಭವಿಗೆ ಒಂದು ಘಟಕ ಹಾಗೂ ಪರಿಶಿಷ್ಟ ಜಾತಿ ವರ್ಗಕ್ಕೆ ವೈಯಕ್ತಿಕ ಫಲಾನುಭವಿಗಳಿಗೆ ಒಂದು ಘಟಕದ ಗುರಿ ನಿಗದಿಪಡಿಸಿದ್ದು, ಆಸಕ್ತಿಯುಳ್ಳ ಫಲಾನುಭವಿಗಳು ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ, ಪಹಣಿ, ಜಾತಿ ಪ್ರಮಾಣ ಪತ್ರ-ಎಫ್‌ಐಡಿಯೊಂದಿಗೆ, ಗುರುತಿನ ಪತ್ರ, ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ವಿವರ, ತಾತ್ವಿಕ ಸಾಲ ಮಂಜುರಾತಿ ಪತ್ರ (in principle loan sanction letter) ದಾಖಲಾತಿಗಳನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಜ.10ರೊಳಗಾಗಿ ಸಲ್ಲಿಸಬಹುದಾಗಿದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.