ರಾಯಚೂರು | ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
Update: 2025-03-20 19:24 IST

ರಾಯಚೂರು : ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ 8 ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನು ಉತ್ತೇಜಿಸಿ ಪ್ರಚಾರ ಪಡಿಸಲು ರಾಯಚೂರು ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಡ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು 30 ದಿನಗಳ ಕಾಲ ಇದ್ದು, ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉಚಿತ ಜಾಕೆಟ್ ಹಾಗೂ ಒಂದು ಜೊತೆ ಸ್ಪೋರ್ಟ್ಸ ಶೂ ನೀಡಲಾಗುವುದು. ಆಸಕ್ತರು ಏ.5 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.