ರಾಯಚೂರು | ವೃತ್ತಿ ತರಬೇತಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನ

ರಾಯಚೂರು : ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ವತಿಯಿಂದ ಗ್ರಾಮೀಣ ಭಾಗದ ಅರ್ಹ ಬಿಪಿಎಲ್ ನಿರುದ್ಯೋಗಿ ಮಹಿಳೆಯರಿಗಾಗಿ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ನೀಡಲಾಗುತ್ತಿದ್ದು, ಆಸಕ್ತರು 8ನೇ ತರಗತಿ ವ್ಯಾಸಂಗ ಮಾಡಿರಬೇಕು. 18 ರಿಂದ 45 ವರ್ಷದೊಳಗೆ ಇರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್, 4 ಪೋಟೋ ಹಾಗೂ ಪಾನ್ ಕಾರ್ಡ್ ಪ್ರತಿಗಳೊಂದಿಗೆ ಮೇ 5ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
13 ದಿನದ ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ಉಚಿತ ವಸತಿ ಸೌಕರ್ಯದ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್‌ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಆಶಾಪೂರು ರಸ್ತೆ, ರಾಯಚೂರು ಅಥವಾ ದೂರವಾಣಿ ಸಂಖ್ಯೆ: 8217382735, 9742470999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.